ಚಿಕ್ಕಮಗಳೂರು : ಮಂಗಳವಾರ ಮುಂಜಾನೆ ಚಾಲಕನ ನಿಯಂತ್ರಣ ತಪ್ಪಿ ಸರಕಾರಿ ಬಸ್ಸೊಂದು ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಮೇಲೆ ಮರ ಬಿದ್ದ ಘಟನೆ ಎನ್.ಆರ್.ಪುರ ತಾಲೂಕಿನ ಸೀಕೆ ಗ್ರಾಮದಲ್ಲಿ ನಡೆದಿದೆ.
ಎನ್.ಆರ್.ಪುರದಿಂದ ಬೆಳಗ್ಗೆ 6 ಗಂಟೆಗೆ ಹೊರಟಿದ್ದ ಬಸ್ ಮೈಸೂರಿಗೆ ಹೊರಟಿತ್ತು ಈ ವೇಳೆ ಸುಮಾರು ಹದಿನೈದು ಕಿಲೋಮೀಟರ್ ದೂರ ಕ್ರಮಿಸಿದಾಗ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಗುದ್ದಿದೆ ಪರಿಣಾಮ ಮರ ಬಸ್ಸಿನ ಮೇಲೆ ಬಿದ್ದು ಕೆಲವು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಬಸ್ಸಿನಲ್ಲಿ ಸುಮಾರು 28 ಜನ ಪ್ರಯಾಣಿಕರಿದ್ದರು ಇದರಲ್ಲಿ 10-12 ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಎನ್.ಆರ್.ಪುರ ಹಾಗೂ ಬಾಳೆಹೊನ್ನೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.