ಉಡುಪಿ: ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಮಾಡಲಾಗಿದೆ ಎನ್ನಲಾದ ಪ್ರಕರಣ ಅತ್ಯಂತ ಸೂಕ್ಷ್ಮವಾದದ್ದು. ಹೆಣ್ಣುಮಕ್ಕಳಿಗೆ ಸಂಬಂಧಿಸಿದ ಮತ್ತು ವಿದ್ಯಾರ್ಥಿಗಳ ಭವಿಷ್ಯದ ವಿಷಯವಾಗಿರುವುದರಿಂದ ಸರಕಾರ ಮೊದಲಿಂದಲೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ತನಿಖೆ ಇನ್ನಷ್ಟು ಆಳವಾಗಿ ಮತ್ತು ಸ್ವತಂತ್ರವಾಗಿ ನಡೆಯಲಿ ಎನ್ನುವ ಕಾರಣಕ್ಕೆ ಸಿಐಡಿಗೆ ಒಪ್ಪಿಸಲಾಗಿದೆ.
ಈ ಕುರಿತು ಹೇಳಿಕೆ ನೀಡಿದ ಅವರು ವಿಡಿಯೋ ಮಾಡಲಾಗಿದೆ ಎನ್ನಲಾದ ಪ್ರಕರಣ ಹೆಣ್ಣುಮಕ್ಕಳಿಗೆ ಸಂಬಂಧಿಸಿದ ಮತ್ತು ವಿದ್ಯಾರ್ಥಿಗಳ ಭವಿಷ್ಯದ ವಿಷಯವಾಗಿರುವುದರಿಂದ ಸರಕಾರ ಮೊದಲಿಂದಲೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯಲಿ ಎನ್ನುವ ಉದ್ದೇಶದಿಂದ ಸಿಐಡಿಗೆ ಒಪ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.