ಕಾಪು:ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಆ. 9ರ ಬೆಳಿಗ್ಗೆ 11ರಿಂದ ಮಧ್ಯಾಹ್ನ 1. 30ರವರೆಗೆ ಕಾಪು ಪುರಸಭೆಯ ಸಭಾಂಗಣದಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ. ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧವೂ ಸಹ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.