ಬೆಂಗಳೂರು :ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಅಂತ್ಯಕ್ರಿಯೆ ಈಡಿಗ ಸಂಪ್ರದಾಯದಂತೆ ನೆರವೇರಿತು. ವಿಜಯ್ ರಾಘವೇಂದ್ರ ಹಾಗೂ ಮಗ ಶೌರ್ಯ ಅಂತಿಮ ವಿಧಿ ವಿಧಾನ ನೆರವೇರಿಸಿದ್ರು.ಹರಿಶ್ಚಂದ್ರ ಘಾಟ್ನಲ್ಲಿ ಸ್ಪಂದನಾ ಅಂತ್ಯ ಸಂಸ್ಕಾರ ನಡೆಸಲಾಯ್ತು. ಸ್ಪಂದನಾ ಪಾರ್ಥಿವ ಶರೀರ ಪಂಚಭೂತಗಳಲ್ಲಿ ಲೀನವಾಗಿದೆ.
ನಿನ್ನೆ (ಆಗಸ್ಟ್ 8) ರಾತ್ರಿ ಸ್ಪಂದನಾ ಮೃತದೇಹವನ್ನು ಬೆಂಗಳೂರಿಗೆ ತರಲಾಯ್ತು. ಮಧ್ಯಾಹ್ನದವರೆಗೆ ಮಲ್ಲೇಶ್ವರಂನಲ್ಲಿರುವ ಸ್ಪಂದನಾ ತವರು ಮನೆ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅನೇಕ ಸ್ಯಾಂಡಲ್ವುಡ್ ಸೆಲೆಬ್ರೆಟಿಗಳು ಹಾಗೂ ರಾಜಕೀಯ ಗಣ್ಯರು ಅಂತಿಮ ದರ್ಶನ ಪಡೆದ್ರು. ಸ್ಪಂದನಾ ನಿಧನ ಇಡೀ ಕನ್ನಡ ಚಿತ್ರರಂಗವನ್ನೇ ದುಃಖಕ್ಕೆ ದೂಡಿದೆ.
ಮಲ್ಲೇಶ್ವರಂನ ಬಿ.ಕೆ ಶಿವರಾಮ್ ಅವರ ಮನೆಯಿಂದ ಶ್ರೀರಾಮಂಪುರದ ಹರಿಶ್ಚಂದ್ರ ಘಾಟ್ವರೆಗೂ ಅಂತಿಮ ಯಾತ್ರೆ ನಡೆಯಿತು. ಸಾರ್ವಜನಿಕರು ಸಾಲು ಗಟ್ಟಿ ನಿಂತು ಸ್ಪಂದನಾಗೆ ಅಂತಿಮ ನಮನ ಸಲ್ಲಿಸಿದ್ರು. ಹರಿಶ್ಚಂದ್ರಘಾಟ್ನಲ್ಲಿ ಅಂತಿಮ ವಿಧಿವಿಧಾನ ನೆರವೇರಿಸಲಾಯ್ತು.