ಶಿರ್ವ : ಶಾಲಾ ಬಸ್ ಹಾಗೂ ಶಾಲಾ ಮಕ್ಕಳನ್ನು ಕೊಂಡೊಯ್ಯುತ್ತಿದ್ದ ರಿಕ್ಷಾದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಕಾಪು ತಾಲೂಕಿನ ಕಲ್ಲುಗುಡ್ಡೆ ಗರಡಿ ರಸ್ತೆ ಬಳಿ ನಡೆದಿದೆ.
ರಿಕ್ಷಾದಲ್ಲಿದ್ದ 5 ಮಂದಿ ಮಕ್ಕಳು ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಮಕ್ಕಳನ್ನು ಉಡುಪಿಯ ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ದಾಖಲಾಗಿಸಲಾಗಿದೆ.
ಶಿರ್ವ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.