ಉಡುಪಿ : ಜಿಲ್ಲಾಡಳಿತ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯ ಹಾಗೂ ಮಾಜಿ ಮುಖ್ಯಮಂತ್ರಿ ಶ್ರೀ ದೇವರಾಜ ಅರಸು ಜಯಂತಿ ಆಚರಣೆಯ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿಗಳಾದ ಡಾ. ಕೆ. ವಿದ್ಯಾ ಕುಮಾರಿವಹಿಸಿದ್ದರು.ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಎಚ್. ಪ್ರಸನ್ನ,ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಅಪರ ಜಿಲ್ಲಾಧಿಕಾರಿಗಳಾದ ಶ್ರೀಮತಿ ವೀಣಾ ಬಿ. ಎನ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಪೂರ್ಣಿಮ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ಜನಾರ್ಧನ ತೋನ್ಸೆ, ಶ್ರೀ ಬಿ. ಎನ್. ಶಂಕರ ಪೂಜಾರಿ, ನಗರ ಸಭೆ ಮಾಜಿ ಅಧ್ಯಕ್ಷರಾದ ಶ್ರೀ ಕಿರಣ್ ಕುಮಾರ್ ಬೈಲೂರು, ಬಿಲ್ಲವ ಸಮುದಾಯದ ಗಣ್ಯರಾದ ಶ್ರೀ ಹರೀಶ್ ಚಂದ್ರ ಅಮೀನ್, ಶ್ರೀ ಕಾಮರಾಜ್ ಸುವರ್ಣ, ಮಲ್ಪೆ ರಾಘವೇಂದ್ರ ಮೊದಲಾದ ಗಣ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.