ನವದೆಹಲಿ :ಮಂಗಳವಾರ ನವದೆಹಲಿಯ ಕೆಂಪುಕೋಟೆಯ ಬಳಿ ನಡೆಯಲಿರುವ 77ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಾರ್ವಜನಿಕರು ಹೆಚ್ಚಾಗಿ ಭಾಗವಹಿಸಬೇಕೆಂಬ ಕಾರಣಕ್ಕಾಗಿ ದೇಶಾದ್ಯಂತ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 1800 ಮಂದಿ ವಿಶೇಷ ವ್ಯಕ್ತಿಗಳಿಗಳನ್ನು ಈ ಭಾರಿ ಆಹ್ವಾನಿಸಲಾಗಿದೆ
ಶಿಕ್ಷಕರು, ಮೀನುಗಾರರು, ಕುಶಲಕರ್ಮಿಗಳು ಮತ್ತು ವಿವಿಧ ಕಾರ್ಯಕ್ರಮಗಳ ಫಲಾನುಭವಿಗಳನ್ನು ಒಳಗೊಂಡಂತೆ ಕರ್ನಾಟಕದಿಂದ ಆಯ್ಕೆಯಾದ ಒಟ್ಟು 31 ವ್ಯಕ್ತಿಗಳು ನವದೆಹಲಿಯಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆಯನ್ನು ವೀಕ್ಷಿಸಲಿದ್ದಾರೆ.
ಪಿಎಂ-ಕಿಸಾನ್ ಯೋಜನೆಯ ದಾದಿಯರು, ರೈತರು ಮತ್ತು ಫಲಾನುಭವಿಗಳನ್ನು ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಲು ದೇಶಾದ್ಯಂತ ಆಹ್ವಾನಿಸಲಾಗಿದೆ.
ಈ ಸ್ವಾತಂತ್ರ್ಯ ದಿನಾಚರಣೆಯು ಮೇರಿ ಮಾಠಿ ಮೇರಾ ದೇಶ್ ಅಭಿಯಾನದ ಮೂಲಕ ದೇಶದ ಹುತಾತ್ಮರಿಗೆ ಗೌರವ ಸಲ್ಲಿಸಲಾಗುತ್ತದೆ. ಈ ಅಭಿಯಾನವನ್ನು ಪ್ರಧಾನಿ ನರೇಂದ್ರ ಮೋದಿಯವರು ಜುಲೈ 30 ರಂದು ತಮ್ಮ 103 ನೇ ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಘೋಷಿಸಿದ್ದರು.