ಬೆಂಗಳೂರು :77ನೇ ಸ್ವಾತಂತ್ರ್ಯೋತ್ಸವದ ಹಿನ್ನಲೆ ಇಂದು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಧ್ವಜಾರೋಹಣ ನೆರವೇರಿಸಿದ್ದಾರೆ.
ಧ್ವಜಾರೋಹಣಕ್ಕೂ ಮುನ್ನ ಸಿಎಂ ಗೌರವವಂದನೆ ಸ್ವೀಕರಿಸಿದ್ರು. ಸ್ವಾತಂತ್ರ್ಯ ದಿನಾಚರಣೆ ವಿಶೇಷವಾಗಿ ಸೇನೆ, ಪ್ಯಾರಾ ಮಿಲಿಟರಿ ಪಡೆಗಳು, ಅಗ್ನಿಶಾಮಕ ದಳ, ಸೇವಾ ದಳ, ರಾಜ್ಯ ಮೀಸಲು ಪೊಲೀಸ್ ಪಡೆಗಳು, ಎನ್ಸಿಸಿ, ಆರ್ಮಿ ಸ್ಕೂಲ್, ವಿದ್ಯಾರ್ಥಿಗಳು ಪರೇಡ್ ನಡೆಸಲಿದ್ದಾರೆ.
ಸರ್ಕಾರಿ ಶಾಲಾ ವಿದ್ಯಾರ್ಥಿಗಳು ನೃತ್ಯವನ್ನು ಮಾಡಲಿದ್ದಾರೆ
ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಅನೇಕ ಅತಿಥಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಇನ್ನು ಕಾರ್ಯಕ್ರಮಕ್ಕೆ ಹೆಚ್ಚಿನ ಜನ ಆಗಮಿಸುವ ಹಿನ್ನಲೆ ಮೈದಾನದ ಸುತ್ತ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾ ವಹಿಸಿದ್ದಾರೆ.