ಉಡುಪಿ : 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅಜ್ಜರಕಾಡುವಿನ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಉಡುಪಿ ಜಿಲ್ಲಾಡಳಿತದ ವತಿಯಿಂದ ವಿಜೃಂಭಣೆಯಿಂದ ಆಚರಿಸಲಾಯಿತು.
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಮತ್ತು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಧ್ವಜಾರೋಹಣ ನಡೆಸಿ ಗೌರವ ವಂದನೆ ಸ್ವಿಕರಿಸಿದರು.
ಉಡುಪಿ ಜಿಲ್ಲೆ ಅತ್ಯಂತ ಬುದ್ದಿವಂತರ ಜಿಲ್ಲೆ ಎನ್ನುವ ಹೆಸರು ಪಡೆದಿದೆ. ಇಲ್ಲಿಯ ಉಸ್ತುವಾರಿ ಸಚಿವೆಯಾಗಿ ಸೇವೆ ಸಲ್ಲಿಸುವ ಅವಕಾಶ ನನಗೆ ಲಭ್ಯವಾಗಿದೆ. ಕಡಲು ಕೊರೆತ, ಕಾಲು ಸಂಕ ಸೇರಿದಂತೆ ಇಲ್ಲಿನ ಹಲವಾರು ವಿಶಿಷ್ಟ ಸಮಸ್ಯೆಗಳು, ಬೇಡಿಕೆಗಳು ನನ್ನ ಗಮನದಲ್ಲಿವೆ. ಅವುಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ನಾನು ಎಲ್ಲ ರೀತಿಯ ಕ್ರಮ ವಹಿಸುತ್ತೇನೆ. ಅಭಿವೃದ್ಧಿಯ ಮೂಲಕ ಉಡುಪಿ ಜಿಲ್ಲೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಸಂಕಲ್ಪ ಮಾಡುತ್ತೇನೆ. ಇದಕ್ಕೆ ಶ್ರೀಕೃಷ್ಣ ಪರಮಾತ್ಮನ ಆಶಿರ್ವಾದ ಮತ್ತು ತಮ್ಮೆಲ್ಲರ ಸಹಕಾರವನ್ನು ಬಯಸುತ್ತೆನೆ” ಎಂದರು.
ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ ಎಚ್, ಪೋಲಿಸ್ ವರಿಷ್ಟಾದಿಕಾರಿ ಹಾಕೆ ಅಕ್ಷಯ್ ಮಚೇಂದ್ರ ಮತ್ತಿತರರು ಉಪಸ್ಥಿತರಿದ್ದರು