ಉಡುಪಿ – ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಉಡುಪಿಯ ಅಜ್ಜರಕಾಡುವಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದ ವೇಳೆ ವಿಶೇಷ ಚೇತನರಿಗೆ ದ್ವಿಚಕ್ರ ವಾಹನ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್, ಬ್ರೈಲ್ ಕಿಟ್, ಶ್ರವಣ ದೋಷವುಳ್ಳ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ, ನಮ್ಮೆಲ್ಲರ ನೆಚ್ಚಿನ ನಾಯಕರಾದ ಉದಯ ಶೆಟ್ಟಿ ಮುನಿಯಾಲು ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಸಾದ್ ರಾಜ್ ಕಾಂಚನ್, ರಮೇಶ್ ಕಾಂಚನ್ ಮೊದಲದವರು ಉಪಸ್ಥಿತರಿದ್ದರು