ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದಂತ ವೀರರನ್ನು ನೆನಪಿಸಿಕೊಳ್ಳುವುದರ ಜೊತೆ ಜೊತೆಗೆ ಭಾರತೀಯ ಮೌಲ್ಯಗಳನ್ನು ವೃದ್ಧಿಸುವ ಅನೇಕ ಕಾರ್ಯ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕಾಗಿದೆ. ಆ ನಿಟ್ಟಿನಲ್ಲಿ ಇಂದಿನ ಮಕ್ಕಳಿಗೆ ದೇಶ ಪ್ರೇಮದ ಅರಿವು ಮೂಡಿಸುವುದು ನಮ್ಮೆಲ್ಲರ ಕರ್ತವ್ಯ ಆಗಿರುತ್ತದೆ ಎಂದು ಹಿರಿಯ ರಂಗಕರ್ಮಿ ಶ್ರೀ ಚಂದ್ರನಾಥ ಬಜಗೋಳಿ ಹೇಳಿದರು.
ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಕಾರ್ಕಳ ಇಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷೆ ಶ್ರೀಮತಿ ಶೋಭಾ ಧ್ವಜಾರೋಹಣವನ್ನು ನೆರವೇರಿಸಿದರು. ಶಿಕ್ಷಣ ಇಲಾಖೆಯ CRP ಶ್ರೀಮತಿ ಜ್ಯೋತಿ ನಾಯಕ್ ಮಾತನಾಡುತ್ತಾ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಬಲಿದಾನ ಮಾಡಿದ ಮಹನೀಯರನ್ನು ನಾವು ಸ್ಮರಿಸಬೇಕು. ಅವರ ಜೀವನ ಚರಿತ್ರೆಯ ಕತೆಗಳನ್ನು ವಿದ್ಯಾರ್ಥಿಗಳು ಓದಿ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಪೋಷಕರಾದ ಶ್ರೀ ಪರಸಪ್ಪ ಜೋಗಿನ, ಬಾಲಾಜಿ ಜ್ಯುವೆಲ್ಲರಿಯ ಮಾಲಕ ಶ್ರೀ ಪ್ರಭಾಕರ ಪಾಟೀಲ್ , ಶಾಲಾ ಹಿರಿಯ ಸಹ ಶಿಕ್ಷಕಿ ಶ್ರೀಮತಿ ಶಶಿಕಲಾ, ಗೌರವ ಶಿಕ್ಷಕಿ ಶ್ರೀಮತಿ ಮಧುಶ್ರೀ ಹಾಗೂ ಶಾಲಾ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.ಶಾಲಾ ಮುಖ್ಯೋಪಾಧ್ಯಾಯಿನಿ ಪದವೀಧರ ಸಹ ಶಿಕ್ಷಕಿ ಶ್ರೀಮತಿ ಪ್ರತಿಮಾ ಎಸ್ ಸ್ವಾಗತಿಸಿದರು.
ಹಿರಿಯ ಸಹ ಶಿಕ್ಷಕಿ ಶ್ರೀಮತಿ ಗ್ರೇಸ್ ವಜ್ರಾವತಿ ವಹಿಸಿದ್ದರು. ಗೌರವ ಶಿಕ್ಷಕಿ ಕುಮಾರಿ ಅಶ್ವಿನಿ ನಿರೂಪಿಸಿದರು.