ಉಡುಪಿ : ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಯುವ ಸಬಲೀಕರಣ, ಕ್ರೀಡಾ ಇಲಾಖೆಯು ಸ್ವಯಂ ಉದ್ಯೋಗ ಹೊಂದಲು ಜಿಮ್ ಘಟಕ ಸ್ಥಾಪನೆಗೆ ಸಹಾಯಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗುತ್ತಿದೆ.
ಪರಿಶಿಷ್ಟ ಜಾತಿಯ ಅರ್ಹ ಕ್ರೀಡಾಪಟುಗಳು ಪ್ರಸ್ತಾವನೆಗಳನ್ನು ಸೂಕ್ತ ದಾಖಲೆಗಳೊಂದಿಗೆ ಆ. 31ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಡಾ. ರೋಶನ್ ಕುಮಾರ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಕ್ರೀಡಾ ಇಲಾಖೆ, ಉಡುಪಿ ಜಿಲ್ಲೆ(0820-2521324, 9845432303) ಇವರನ್ನು ಸಂಪರ್ಕಿಸಲು ಕೋರಲಾಗಿದೆ.