ಸಾಲಿಗ್ರಾಮ : ಕುಮಾರಿ ಸೌಜನ್ಯ ಅವರ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಆ. 19ರ ಶನಿವಾರ ಸಂಜೆ 4. 30ಕ್ಕೆ ಸಾಲಿಗ್ರಾಮ ಬಸ್ ನಿಲ್ದಾಣದಲ್ಲಿ ಪ್ರತಿಭಟನಾ ಸಭೆ ನಡೆಯಲಿದ್ದು, ಶ್ರೀ ಗುರು ನರಸಿಂಹ ಮತ್ತು ಆಂಜನೇಯ ಸ್ವಾಮಿಯವರಲ್ಲಿ ಸೌಜನ್ಯಳ ತಾಯಿ ಕುಸುಮಾವತಿ, ತನ್ನ ಮಗಳ ಹತ್ಯೆ ಮತ್ತು ಅತ್ಯಾಚಾರಿ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಶ್ರೀ ದೇವರುಗಳಲ್ಲಿ ಪ್ರಾರ್ಥಿಸಲಿದ್ದಾರೆ. ಬಳಿಕ ಸಾರ್ವಜನಿಕರನ್ನು ಉದ್ದೇಶಿಸಿ ತಮ್ಮ ಹೋರಾಟಕ್ಕೆ ಬೆಂಬಲವನ್ನು ಯಾಚಿಸಲಿದ್ದಾರೆ.