ಕಾರ್ಕಳ : ದಿನಾಂಕ 21. 08, 2023ರ ಸೋಮವಾರ ನಾಗರ ಪಂಚಮಿಯ ವಿಶೇಷ ದಿನದಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಕುಟುಂಬಗಳು ಶ್ರೀ ನಾಗ ದೇವರ ಪೂಜಾ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗುವ ದೃಷ್ಟಿಯಿಂದ ಶಾಲಾ- ಕಾಲೇಜು ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಬೇಕೆಂದು ಕಾರ್ಕಳ ಶಾಸಕರಾದ ವಿ. ಸುನಿಲ್ ಕುಮಾರ್ರವರು ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.