ಉಡುಪಿ : ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಯ ಎರಡನೇ ಪೂರಕ ಪರೀಕ್ಷೆ ಆ. 21ರಿಂದ ಸೆ. 2ರವರೆಗೆ ಜಿಲ್ಲೆಯ ಒಟ್ಟು 4 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ.
ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಯಲು, ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.