ಗುತ್ತಿಗೆ ಆಧಾರದಲ್ಲಿ ಚಾಲಕರನ್ನು ನೇಮಕಗೊಳಿಸುವ ಪ್ರಕ್ರಿಯೆಗೆ ರಾಜ್ಯ ಸರಕಾರದ ಸಾರಿಗೆ ನಿಗಮದ ಬಸ್ ಗಳಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ನೇರ ನೇಮಕ ಪ್ರಕ್ರಿಯೆ ನಡೆಯಲಿದೆ. ದ.ಕ. ಹಾಗೂ ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಆಗಸ್ಟ್ ತಿಂಗಳ 22ರ ಮಂಗಳವಾರದಂದು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಇಂದಿರಾಗಾಂಧಿ ಜನ್ಮಶತಾಬ್ದಿ ಭವನದ ಕೆಳ ಅಂತಸ್ಥಿನಲ್ಲಿ ಸಂದರ್ಶನಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಬೆಳಗ್ಗೆ 10 ಗಂಟೆಯಿಂದ 1ಗಂಟೆಯ ತನಕ ಅವಕಾಶ ಕಲ್ಪಿಸಲಾಗಿದೆ.