ಚಿಕ್ಕಮಗಳೂರು: ಅಪರೂಪದ ತಳಿ ಅಂಬೂರು ಸಮುದ್ರ ಮೀನಿಗಾಗಿ ನಗರದಲ್ಲಿ ಮೀನುಪ್ರಿಯರು ಮುಗಿಬಿದ್ದಿದ್ದಾರೆ. ಬರೋಬ್ಬರಿ 340 ಕೆಜಿ ತೂಕದ ಅಂಬೂರು ಸಮುದ್ರದ ಮೀನಿಗೆ ಗ್ರಾಹಕರು ಸರತಿ ಸಾಲಿನಲ್ಲಿ ನಿಂತು ಖರೀದಿಸಿದ್ದಾರೆ.
ಚಿಕ್ಕಮಗಳೂರು ನಗರದ ಉಪ್ಪಳ್ಳಿ ಬಡಾವಣೆಯ ಮೀನು ಮಳಿಗೆಗೆ ಇದೇ ಮೊದಲ ಬಾರಿಗೆ ಮಂಗಳೂರಿನಿಂದ ಬಂದ ಬರೋಬ್ಬರಿ 340 ಕೆಜಿ ತೂಕದ ಅಂಬೂರು ಸಮುದ್ರ ಮೀನು ಕಂಡು ಗ್ರಾಹಕರು ಹಾಗೂ ಸ್ಥಳೀಯರು ಶಾಕ್ ಆಗಿದ್ದಾರೆ.
ಉಪ್ಪಳ್ಳಿ ಬಡಾವಣೆಯ ಮೀನಿನ ಅಂಗಡಿಯಲ್ಲಿ ಭಾರೀ ಗಾತ್ರದ ಮೀನು ಕಂಡು ಸ್ಥಳೀಯರು ಅಚ್ಚರಿ ವ್ಯಕ್ತಪಡಿಸಿದ್ದು, ಮೀನಿನ ಗಾತ್ರ ನೋಡಲು ಅಂಗಡಿ ಬಳಿ ಜನ ಜಾತ್ರೆ ನೆರೆದಿದೆ.