ನವದೆಹಲಿ: ಆಗಸ್ಟ್ 23 ರಿಂದ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಅಧಿಕೃತ ವಕ್ತಾರರು ಖಚಿತಪಡಿಸಿದ್ದಾರೆ.
ಜುಲೈ 1 ರಂದು ಎರಡು ಮಾರ್ಗಗಳ(ಅನಂತನಾಗ್ ಜಿಲ್ಲೆಯ ಸಾಂಪ್ರದಾಯಿಕ 48-ಕಿಮೀ ಉದ್ದದ ಪಹಲ್ಗಾಮ್ ಟ್ರ್ಯಾಕ್ ಮತ್ತು ಗಂಡರ್ಬಾಲ್ ಜಿಲ್ಲೆಯ 14-ಕಿಮೀ ಉದ್ದದ ಬಾಲ್ಟಾಲ್ ಟ್ರ್ಯಾಕ್) ಮೂಲಕ 62 ದಿನಗಳ ಯಾತ್ರೆ ಪ್ರಾರಂಭವಾದಾಗಿನಿಂದ 4.4 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳು ದೇಗುಲಕ್ಕೆ ಭೇಟಿ ನೀಡಿದ್ದಾರೆ.
ಯಾತ್ರಾರ್ಥಿಗಳ ಹರಿವು ಗಣನೀಯವಾಗಿ ಕಡಿಮೆಯಾಗಿರುವುದು ಮತ್ತು ಗಡಿ ರಸ್ತೆಗಳ ಸಂಸ್ಥೆ (ಬಿಆರ್‌ಒ) ಸೂಕ್ಷ್ಮ ಪ್ರದೇಶಗಳಲ್ಲಿ ಯಾತ್ರಾ ದಾರಿಗಳ ತುರ್ತು ದುರಸ್ತಿ ಮತ್ತು ನಿರ್ವಹಣೆಯಿಂದಾಗಿ ಎರಡೂ ಕಡೆಗಳಲ್ಲಿ ಯಾತ್ರಾರ್ಥಿಗಳ ಸಂಚಾರ ಕಡಿಮೆಯಾಗಿದೆ. ಹೀಗಾಗಿ, ಪವಿತ್ರ ಗುಹೆಯ ಕಡೆಗೆ ಹೋಗುವುದು ಸೂಕ್ತವಲ್ಲ ಎಂದು ಶ್ರೈನ್ ಬೋರ್ಡ್ ಅಧಿಕಾರಿಗಳನ್ನು ಉಲ್ಲೇಖಿಸಿ ವಕ್ತಾರರು ತಿಳಿಸಿದ್ದಾರೆ.