ಕುಂದಾಪುರ : ಇಂದು ಆ. 23 ಮತ್ತು 24ರಂದು ಅತಿಥಿ ಶಿಕ್ಷಕರು ಸರಕಾರಿ ಶಾಲೆಗಳಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹೊರಬಂದು ಪ್ರತಿಭಟನೆ ನಡೆಸಲಿದ್ದಾರೆ.
ರಾಜ್ಯ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರು ರಾಜ್ಯದ ಸರಕಾರಿ ಶಾಲೆಗಳಲ್ಲಿ 11-12 ವರ್ಷಗಳಿಂದ ಕಡಿಮೆ ವೇತನ, ಸೇವಾ ಭದ್ರತೆ, ಕೃಪಾಂಕ ಸೇರಿದಂತೆ ಯಾವುದೇ ರೀತಿಯ ಸೌಲಭ್ಯಗಳಿಲ್ಲದಿದ್ದರೂ ಪ್ರಾಮಾಣಿಕತೆಯಿಂದ ಮಕ್ಕಳ ಶೈಕ್ಷಣಿಕ ಬದುಕನ್ನು ಕಟ್ಟಿಕೊಡುವಲ್ಲಿ ಕಾರ್ಯನಿರತವಾಗಿದೆ.
ಸಚಿವ ಮಧು ಬಂಗಾರಪ್ಪ ಸಮ್ಮುಖದಲ್ಲಿ ಅತಿಥಿ ಶಿಕ್ಷಕರ ಸಮಸ್ಯೆಗಳ ಬಗ್ಗೆ ಸಭೆಯನ್ನು ಮಾಡಿದ್ದು, ಸಚಿವರು ಕೂಡ ಸೂಕ್ತ ಭರವಸೆ ನೀಡಿದ್ದಾರೆ. ಆದರೆ ಈ ವರೆಗೆ ಯಾವುದೂ ಈಡೇರಿಲ್ಲ ಎಂದು ಸಂಘ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದ ಸಮಸ್ತ ಅತಿಥಿ ಶಿಕ್ಷಕರು ಎರಡು ದಿನಗಳ ಕಾಲ ಸಾಮೂಹಿಕವಾಗಿ ಹಾಗೂ ಸಾಂಕೇತಿಕವಾಗಿ “ಶಾಲೆ ತೊರೆಯೋಣ’ ಅಭಿಯಾನ ನಡೆಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.