ಕೇಂದ್ರ ಸಂವಹನ ಇಲಾಖೆ ಮಂಗಳೂರು, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮತ್ತು ಪೂರ್ಣಪ್ರಜ್ಞ ಕಾಲೇಜು ಉಡುಪಿ ಇದರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯದ ಅಮೃತ ಮಹೋತ್ಸವ, ಬಡವರ ಕಲ್ಯಾಣ, ಪ್ರಧಾನ ಮಂತ್ರಿ ವಿಷನ್ ಫಾರ್ ಇಂಡಿಯಾ 2047, ಏಕ ಭಾರತ ಶ್ರೇಷ್ಠ ಭಾರತ ವಿಶೇಷ ಕಾರ್ಯಕ್ರಮ ಹಾಗೂ ವಿಶೇಷ ಛಾಯಾಚಿತ್ರ ಪ್ರದರ್ಶನ ವನ್ನು ಕೇಂದ್ರ ಸರಕಾರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವರಾದ ಮಾನ್ಯ ಶೋಭಾ ಕರಂದ್ಲಾಜೆ ಉದ್ಘಾಟಿಸಿದರು.
ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಾಧನೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.