ಉಡುಪಿ : ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೇಂದ್ರ ಸರಕಾರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವರಾದ ಮಾನ್ಯ ಶೋಭಾ ಕರಂದ್ಲಾಜೆ ಯವರ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಯಿತು
ಸಭೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಉಡುಪಿ ಜಿಲ್ಲಾಧಿಕಾರಿಗಳಾದ ಡಾ. ವಿದ್ಯಾ ಕುಮಾರಿ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಅಕ್ಷಯ್ ಹಾಕೆ ಮಚ್ಚಿಂದ್ರ, ಕುಂದಾಪುರ ಉಪ ವಿಭಾಗಾಧಿಕಾರಿ ಶ್ರೀಮತಿ ರಶ್ಮಿ ನಗರಸಭೆಯ ಪೌರಾಯುಕ್ತರಾದ ಶ್ರೀ ರಾಯಪ್ಪ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಕೊಂಕಣ ರೈಲ್ವೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.