ಉಡುಪಿ : ಸ್ಥಳೀಯ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಸಂಸ್ಥೆಯ ಗೌರಾವಾಧ್ಯಕ್ಷರಾಗಿದ್ದ ಸಾಮಾಜಿಕ ಕಾರ್ಯಕರ್ತ ಮಂಜುನಾಥ ಉದ್ಯಾವರ ಅವರ ಹನ್ನೊಂದನೇ ಪುಣ್ಯ ಸ್ಮರಣೆಯ ಅಂಗವಾಗಿ ಉಡುಪಿಯ ಜಿಲ್ಲಾ ಆಸ್ಪತ್ರೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರವು ಆ.27ರ ರವಿವಾರ ಬೆಳಗ್ಗೆ 9:30ರಿಂದ ಅಪರಾಹ್ನ 1:00ಗಂಟೆಯವರೆಗೆ ಉದ್ಯಾವರ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಲಿದೆ.
ರಕ್ತದಾನ ಶಿಬಿರವನ್ನು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷೆ ಸರಳಾ ಕಾಂಚನ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಸುದೇಶ್ ಕುಮಾರ್, ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಹಾಯಕ ನಿರ್ದೇಶಕರಾದ ಪೂರ್ಣಿಮಾ ಮತ್ತು ಉಡುಪಿ ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ವೀಣಾ ಭಾಗವಹಿಸುವರು.
ಅಧ್ಯಕ್ಷತೆಯನ್ನು ಸಂಸ್ಥೆಯ ಗೌರವಾಧ್ಯಕ್ಷ ಉದ್ಯಾವರ ನಾಗೇಶ್‌ಕುಮಾರ್ ವಹಿಸಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ರಿಯಾಝ್ ಪಳ್ಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.