ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾರತೀಯ ಸೇನೆ ಹಾಗೂ ಇತರೆ ಯೂನಿಫಾರ್ಮ್ ಸೇವಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಂದ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆ. 15 ಕೊನೆಯ ದಿನ. ಮಾಹಿತಿಗಾಗಿ 805077000 ಅನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.