ಬೆಂಗಳೂರು, ಆಗಸ್ಟ್ 24 : ಸೆಮಿಕಂಡಕ್ಟರ್ ಅಸೆಂಬ್ಲಿ ಬಿಡಿಭಾಗಗಳನ್ನು ಮತ್ತು ಟೆಸ್ಟಿಂಗ್ ಸೌಲಭ್ಯ, ಪ್ರಿಂಟೆಡ್ ಸರ್ಕಿಟ್ ಬೋರ್ಡ್ ಉತ್ಪಾದನಾ ಘಟಕವನ್ನು ಮೈಸೂರಿನ ಕೋಚನಹಳ್ಳಿಯಲ್ಲಿ ಸ್ಥಾಪಿಸಲು ಇಂದು ಕೇನ್ಸ್ ಟೆಕ್ನಾಲಜೀಸ್ ಸಂಸ್ಥೆ ಹಾಗೂ ಕೈಗಾರಿಕಾ ಇಲಾಖೆಯ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು.
ಈ ಒಪ್ಪಂದದಿಂದ ರಾಜ್ಯದಲ್ಲಿ ಎಲೆಕ್ಟ್ರಾನಿಕ್ಸ್ ಹಾಗೂ ಸೆಮಿಕಂಡಕ್ಟರ್ ಉತ್ಪಾದನಾ ಅಭಿವೃದ್ಧಿಗೆ ಪೂರಕವಾಗಲಿದೆ. ಹಾಗೂ ಉದ್ಯೋಗಾವಕಾಶಗಳು ಹೆಚ್ಚಾಗಲಿವೆ.
ಈ ಸಂದರ್ಭದಲ್ಲಿ ಆರ್.ಡಿ.ಪಿಆರ್ ಮತ್ತು ಐ.ಟಿ ಬಿಟಿ ಸಚಿವ ಪ್ರಿಯಾಂಕ ಖರ್ಗೆ, ಕೈಗಾರಿಕಾ ಇಲಾಖೆ ಆಯುಕ್ತ ರಾದ ಗುಂಜನ್ ಕೃಷ್ಣಾ, ಕೇನ್ಸ್ ಸಂಸ್ಥೆಯ ಸಿಇಒ ರಮೇಶ್ ಕಣ್ಣನ್, ಉಪಸ್ಥಿತರಿದ್ದರು.