ಬೆಂಗಳೂರು : ಕರ್ನಾಟಕ ಆದಿಜಾಂಬವರ ಸಾಂಸ್ಕೃತಿಕ ಸಮಿತಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ದಿ.ಡಾ.ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಸಿದ್ದಲಿಂಗಯ್ಯ ಅವರ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿದರು.
ಮಾಜಿ ಸಚಿವ ಹೆಚ್.ಆಂಜನೇಯ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ಹೆಚ್.ಸಿ.ಮಹದೇವಪ್ಪ, ಹಿರಿಯ ಸಾಹಿತಿಗಳಾದ ಕೆ.ಮರುಳಸಿದ್ದಪ್ಪ, ಎಸ್.ಜಿ.ಸಿದ್ದರಾಮಯ್ಯ, ಅಗ್ರಹಾರ ಕೃಷ್ಣಮೂರ್ತಿ ಹಾಗೂ ಪ್ರಜಾವಾಣಿ ಪತ್ರಿಕೆ ಸಂಪಾದಕರಾದ ರವೀಂದ್ರ ಭಟ್, ಶಿಕ್ಷಣ ತಜ್ಞ ನಿರಂಜನಾರಾಧ್ಯ, ಇಂದಿರಾ ಕೃಷ್ಣಪ್ಪ, ಪ್ರೊ.ಜಾಫೆಟ್ ಸೇರಿ ಹಲವರು ಉಪಸ್ಥಿತರಿದ್ದರು.