ಉಡುಪಿ : ದೇಶದ ಹೆಮ್ಮೆಯ ಇಸ್ರೋದ ಚಂದ್ರಯಾನ ಸರಣಿಯ ಮೂರನೇ ಯಾನದ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವ ಮೇಲ್ಮೈನಲ್ಲಿ ಸಾಫ್ಟ್ ಲ್ಯಾಂಡಿಂಗ್ ಮಾಡುವ ಮೂಲಕ ಐತಿಹಾಸಿಕ ಯಶಸ್ಸು ಸಾಧಿಸಿದ ಇಸ್ರೋ ವಿಜ್ಞಾನಿಗಳ ಮಹತ್ಕಾರ್ಯಕ್ಕೆ , ಕಲಾವಿದ ಹರೀಶ್ ಸಾಗ ನೇತೃತ್ವದ ‘ಸ್ಯಾಂಡ್ ಥೀಂ ಉಡುಪಿ’ ತಂಡದ ಸದಸ್ಯರು ಉಡುಪಿಯ ಮಲ್ಪೆ ಕಡಲ ಕಿನಾರೆಯಲ್ಲಿ ಸುಂದರವಾದ ಮರಳು ಶಿಲ್ಪವನ್ನು ಬಿಡಿಸಿ ಕಂಗ್ರಾಜ್ಯುಲೇಶನ್ ಇಸ್ರೋ’ ಎಂಬ ಶೀರ್ಷಿಕೆ ನೀಡುವ ಮೂಲಕ ವಿಶಿಷ್ಟವಾಗಿ ಇಸ್ರೋ ಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.