ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವ ಸ್ಪಂದನ ಕೇಂದ್ರ, ಯುವ ಸಬಲೀಕರಣ ಸೇವೆಗಳು, ಡಾ. ಜಿ.ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಉಡುಪಿ ಇವರ ರಾಷ್ಟ್ರೀಯ ಸೇವಾ ಯೋಜನೆ & ರೆಡ್ ರಿಬ್ಬನ್ ಕ್ಲಬ್ ಮತ್ತು ಉಡುಪಿ ಜಿಲ್ಲಾ ಅಮೆಚು ಅಥ್ಲೆಟಿಕ್ಸ್ ಅಸೋಸಿಯೇಷನ್, ಜಿಲ್ಲಾ ಸರ್ವೇಕ್ಷಣಾ ಘಟಕ ಎನ್.ಸಿ.ಡಿ ವಿಭಾಗ ಮತ್ತು ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ, ರೋಟರಿ ಕ್ಲಬ್ ಕಲ್ಯಾಣಪುರ ಮತ್ತು ರೋಟರಿ ಕ್ಲಬ್ ಉಡುಪಿ ಮಿಡ್‌ಟೌನ್ ಇವರ ಸಂಯುಕ್ತ ಆಶ್ರಯದಲ್ಲಿ ಯುವಜನೋತ್ಸವ 2023-24 ಕಾರ್ಯಕ್ರಮದ ಅಂಗವಾಗಿ ಆಗಸ್ಟ್ 27 ರಂದು ಬೆಳಗ್ಗೆ 7 ಗಂಟೆಗೆ ನಗರದ ಅಜ್ಜರಕಾಡು ಡಾ. ಜಿ.ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಿಂದ 5 ಕಿ.ಮೀ. ವರೆಗೆ ಮ್ಯಾರಥಾನ್ ನಡೆಯಲಿದೆ.
ಈ ಮ್ಯಾರಥಾನ್‌ನಲ್ಲಿ 17-25 ವರ್ಷದೊಳಗಿನ ಕಾಲೇಜು ವಿದ್ಯಾರ್ಥಿಗಳು ಮಾತ್ರ ಭಾಗವಹಿಸಬಹುದಾಗಿದ್ದು, ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಯು ರಾಜ್ಯ ಮಟ್ಟದಲ್ಲಿ ರಾಜ್ಯ ಮಟ್ಟದ ವಿಜೇತರು ರಾಷ್ಟ್ರ ಮಟ್ಟದ ಮ್ಯಾರಾಥಾನ್‌ನಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.