ಕಾರ್ಕಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಒಂದು ಬೆಳ್ತಂಗಡಿಯ ಪಡ್ದ೦ದಡ್ಕ ಗಾಂಧಿನಗರದ ನಡುವೆ ಅಪಘಾತಕ್ಕೀಡಾಗಿದೆ.ನಿಯಂತ್ರಣ ಕಳೆದುಕೊಂಡ ಬಸ್ ಪಲ್ಟಿಯಾಗಿದ್ದು ಹಲವು ಮಂದಿ ಗಾಯಗೊಂಡಿದ್ದಾರೆ.
ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು ಬಸ್ಸಿನಲ್ಲಿ ಒಟ್ಟು 27 ಪ್ರಯಾಣಿಕರು ಪ್ರಯಾಣಿಸುತ್ತಿದ್ದು,ಘಟನೆ ಸಂಭವಿಸುತ್ತಿದ್ದಂತೆ ದೊಡ್ಡ ಸಂಖ್ಯೆಯಲ್ಲಿ ಊರವರು ಸ್ಥಳದಲ್ಲಿ ಜಮಾಯಿಸಿದ್ದರು.ವೇಣೂರು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು ಗಾಯಾಳುಗಳನ್ನು ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತು