ಬೆಂಗಳೂರು: ರಾಜ್ಯದ ಎಲ್ಲ ಶಾಲೆಗಳಲ್ಲಿ ವಿದ್ಯಾರ್ಥಿಗಳು ದೇಶದ ಉತ್ತಮ ಪ್ರಜೆಗಳಾಗುವ ನಿಟ್ಟಿನಲ್ಲಿ ಸೆ.5 ರಂದು ಕಡ್ಡಾಯವಾಗಿ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದೆಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದರು.
ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿರುವ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿಂದು ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿ ಅವರು ಮಾತನಾಡಿದರು. ದೇಶದ ಉತ್ತಮ ಪ್ರಜೆಯಾಗಲು ಸಂವಿಧಾನವೇ ಮುಖ್ಯವಾಗಿದೆ. ಬದುಕಲು ಜೀವನ ಪದ್ದತಿ ಅರಿಯಲು ಎಲ್ಲರಿಗೂ ಸಂವಿಧಾನ ಬೇಕು. ಈ ನಿಟ್ಟಿನಲ್ಲಿ ಶಾಲಾ ವಿದ್ಯಾರ್ಥಿಗಳಲ್ಲಿ ಬಾಲ್ಯದಿಂದಲೇ ಸಂವಿಧಾನದ ಮಹತ್ವ ಅರಿಯಲು ಎಲ್ಲ ಶಾಲೆಗಳಲ್ಲಿ ಸೆ.5 ರಂದು ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವದೆಂದರು.
ಸಂವಿಧಾನ ಪಿಠಿಕೆಯ ದೊಡ್ಡ ಪ್ರತಿಯನ್ನು ಕಡ್ಡಾಯವಾಗಿ ಪ್ರತಿ ಶಾಲೆಗಲ್ಲಿ ಕನ್ನಡ ಹಾಗೂ ಇಂಗ್ಲಿಷ್ ಅಳವಡಿಸಲಾಗುವುದೆಂದರು.