ಮೈಸೂರ್ರು: ಈ ಬಾರಿಯ ಮೈಸೂರು ದಸರಾ ಉತ್ಸವವನ್ನು ಸಂಗೀತ ನಿರ್ದೇಶಕ ಹಂಸಲೇಖ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಗರದ ಚಾಮುಂಡಿ ಬೆಟ್ಟದಲ್ಲಿ ಮಂಗಳವಾರ ಬೆಳಿಗ್ಗೆ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಕಾರ್ಡ್‌ಗೆ ಪೂಜೆ ಸಲ್ಲಿಸಿದ ಸಂದರ್ಭ ಪತ್ರಕರ್ತರ ಜೊತೆ ಅವರು ಮಾತನಾಡಿದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಜೊತೆಗಿದ್ದರು.