ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ವತಿಯಿಂದ ಸುತ್ತೂರು ಮಠದಲ್ಲಿ ಆಯೋಜಿಸಿದ್ದ ಪರಮಪೂಜ್ಯ ಜಗದ್ಗುರು ಡಾ ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 108 ನೇ ಜಯಂತಿ ಮಹೋತ್ಸವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಸುತ್ತೂರು ಕ್ಷೇತ್ರ ವೀರಸಿಂಹಾಸನ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು ಮತ್ತು ಆದಿಚುಂಚನಗಿರಿ ಮಹಾಸಂಸ್ಥಾಮ ಮಠದ ಜಗದ್ಗುರು ಡಾ. ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ವಹಿಸಿದ್ದರು.