ಮೈಸೂರು : ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಹಿನ್ನೆಲೆ ಕಾರ್ಯಕ್ರಮದ ಯಶಸ್ವಿಗಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಹರಕೆ ತೀರಿಸಿದ್ದಾರೆ. ತಾಯಿ ಚಾಮುಂಡೇಶ್ವರಿಗೆ ರೇಷ್ಮೆ ಸೀರೆ, ಹಸಿರು ಮತ್ತು ಕೆಂಪು ಸೀರೆ, ಬಳೆ , ಕನಕಾಂಬರ ಮಲ್ಲಿಗೆ ಗುಲಾಬಿ ಹೂವಿನ ಹಾರ, ಬಾಳೆಹಣ್ಣು ದಾಳಿಂಬೆ ಸೇರಿ ಫಲ ಸಮರ್ಪಣೆ ಮಾಡಿದ್ದಾರೆ.
ಗ್ಯಾರಂಟಿ ಯೋಜನೆ ಜಾರಿ ಹಿನ್ನೆಲೆಯಲ್ಲಿ ತಾಯಿ ಚಾಮುಂಡೇಶ್ವರಿಗೆ ಮೇ 9 ರಂದು ಗ್ಯಾರಂಟಿ ಕಾರ್ಡ್ ಜೊತೆ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಹರಕೆ ಕಟ್ಟಿಕೊಂಡಿದ್ದರು. ಯೋಜನೆ ಯಶಸ್ವಿಯಾದ ಹಿನ್ನೆಲೆ ಇಂದು ಬಂದು ಹರಕೆ ತೀರಿಸಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜತೆಗಿದ್ದರು. ಕೆಪಿಸಿಸಿ , ಕಾಂಗ್ರೆಸ್ ಕಾರ್ಯಕರ್ತರು ಈ ವೇಳೆ ಭಾಗಿಯಾಗಿದ್ದರು.