ನವದೆಹಲಿ : ಹಣದುಬ್ಬರದಿಂದ ಕಂಗೆಟ್ಟಿರುವ ಜನರಿಗೆ ಕೇಂದ್ರ ಸರ್ಕಾರ ಬಿಗ್ ರಿಲೀಫ್ ನೀಡಿದ್ದು, ಸರ್ಕಾರವು ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ (LPG Price) 200 ರೂ.ವರೆಗೆ ಕಡಿತಗೊಳಿಸಿದೆ. ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ಮೇಲೆ 200 ರೂ.ಗಳ ಸಹಾಯಧನವನ್ನ ಸರ್ಕಾರ ಘೋಷಿಸಿದೆ.
ಸರ್ಕಾರದ ಪ್ರಕಾರ, ಉಜ್ವಲ ಯೋಜನೆಯಡಿ ಎಲ್‌ಪಿಜಿ ಸಿಲಿಂಡರ್ ಬೆಲೆ 200 ರೂಪಾಯಿಗಳಷ್ಟು ಅಗ್ಗವಾಗಲಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಮಾತ್ರ ಅಡುಗೆ ಅನಿಲದ ಸಬ್ಸಿಡಿಯ ಲಾಭ ಸಿಗಲಿದೆ ಎಂದು ಕೇಂದ್ರ ಸರ್ಕಾರ ಕಳೆದ ವರ್ಷವೇ ಸ್ಪಷ್ಟಪಡಿಸಿತ್ತು. ಅಡುಗೆ ಅನಿಲ ಸಿಲಿಂಡರ್ ಮೇಲೆ ಬೇರೆ ಯಾರಿಗೂ ಸಬ್ಸಿಡಿ ನೀಡುವುದಿಲ್ಲ. ,
ಉಜ್ವಲ ಯೋಜನೆಯಡಿ ಫಲಾನುಭವಿಗಳು ಒಂದು ವರ್ಷದಲ್ಲಿ ಒಟ್ಟು 12 ಅಡುಗೆ ಅನಿಲ ಸಿಲಿಂಡರ್‌ಗಳ ಮೇಲೆ ಸಬ್ಸಿಡಿ ಪಡೆಯಬಹುದು. ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ (ಬಿಪಿಎಲ್) ಸರ್ಕಾರವು ಉಚಿತ ಅಡುಗೆ ಅನಿಲ ಸಂಪರ್ಕವನ್ನು ನೀಡುತ್ತದೆ.
ಸರ್ಕಾರದ ಪ್ರಕಾರ, ಉಜ್ವಲ ಯೋಜನೆಯಡಿ ಎಲ್‌ಪಿಜಿ ಸಿಲಿಂಡರ್ ಬೆಲೆ 200 ರೂಪಾಯಿಗಳಷ್ಟು ಅಗ್ಗವಾಗಲಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.