ಮೈಸೂರು: ಕಾಂಗ್ರೆಸ್‍ನ ಗ್ಯಾರಂಟಿ ಗೃಹಲಕ್ಷ್ಮಿ ಯೋಜನೆಗೆ ಇಂದು ಅಧಿಕೃತವಾಗಿ ಚಾಲನೆ ದೊರೆಯಲಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೆಳಗ್ಗೆ 11:30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು ಮನೆಯ ಮಹಾಲಕ್ಷ್ಮಿಯರ ಖಾತೆಗೆ 2000ರೂ. ಜಮೆಯಾಗಲಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವಾರು ಪ್ರಮುಖ ನಾಯಕರು, ಸಚಿವರು ಪಾಲ್ಗೊಳ್ಳಲಿದ್ದಾರೆ.
ಮಹಿಳೆಯರ ಖಾತೆಗೆ ನೇರವಾಗಿ 2000 ರೂ. ತಲುಪಲಿದೆ.ರಾಜ್ಯದಲ್ಲಿ 1.11 ಕೋಟಿ ಮಹಿಳೆಯರು ಈ ಯೋಜನೆಯಡಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದು, ಯೋಜನೆಯ ಲಾಭ ಪಡೆಯಲಿದ್ದಾರೆ. ಇಂದು ಯೋಜನೆ ಅಧಿಕೃತವಾಗಿ ಜಾರಿಯಾಗುತ್ತಿದ್ದು 5-6 ದಿನದಲ್ಲಿ ಎಲ್ಲಾ 1.11 ಕೋಟಿ ಫಲಾನುಭವಿಗಳ ಅಕೌಂಟ್‍ಗೆ (Account) ಹಣ ತಲುಪಿಸಲು ತಯಾರಿ ಮಾಡಿಕೊಳ್ಳಲಾಗಿದೆ.