ಉಡುಪಿ :ಕೃಷಿ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯಡಿ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆ. 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ಜಿಲ್ಲಾ ಆಡಳಿತ ಕಚೇರಿಗಳ ಸಂಕೀರ್ಣ, ರಜತಾದ್ರಿ ಇಲ್ಲಿಗೆ ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.