ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ಬಿಲ್ಲವರ ಸೇವಾ ಸಂಘ ಉಡುಪಿ ರಿ. ಬನ್ನಂಜೆ ಇದರ ಸಹಕಾರದೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು
ಸಮಾರಂಭವನ್ನು ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ವಿಧಾನಸಭಾ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ವಹಿಸಿ ಬ್ರಹ್ಮಶ್ರೀ ನಾರಾಯಣಗುರುಗಳ ಜೀವನ ಸಂದೇಶವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಂಸ್ಕಾರಯುತ ಸಮಾಜ ಕಟ್ಟೋಣ ಎಂದು ಆಶಯ ವ್ಯಕ್ತಪಡಿಸಿದರು.
ಸಮಾರಂಭದಲ್ಲಿ ಕಾಪು ಶಾಸಕರಾದ ಶ್ರೀ ಸುರೇಶ್ ಶೆಟ್ಟಿ ಗುರ್ಮೆ, ಅಪರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಮಮತ ದೇವಿ ಜಿ. ಎಸ್., ನಗರ ಸಭೆ ಮಾಜಿ ಅಧ್ಯಕ್ಷರಾದ ಶ್ರೀ ಕಿರಣ್ ಬೈಲೂರು, ನಗರ ಸಭಾ ಸದಸ್ಯರುಗಳಾದ ಶ್ರೀಮತಿ ಸವಿತಾ ಹರೀಶ್ ರಾಮ್, ಶ್ರೀ ವಿಜಯ ಕೊಡವೂರು, ಶ್ರೀ ಗಿರೀಶ್ ಅಂಚನ್, ಸಂತೋಷ್ ಜತ್ತನ್, ಶ್ರೀಮತಿ ಎಡ್ಲಿನ್ ಕರ್ಕಡ, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಪೂರ್ಣಿಮ, ಬನ್ನಂಜೆ ಬಿಲ್ಲವ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ಮಾಧವ ಪೂಜಾರಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು