ಮಂಗಳೂರು:ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಎಂಬಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.31 ರಂದು ನಡೆದಿದೆ.ಪುದುವೆಟ್ಟು ಕುಬಲ ನಿವಾಸಿ ಸ್ವರಾಜ್ (24) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ.ಸ್ವರಾಜ್ ಪ್ರಸುತ್ತ ಧರ್ಮಸ್ಥಳದಲ್ಲಿ ವಾಸವಾಗಿದ್ದು ಇಂದು ಪುದುವೆಟ್ಟುವಿನಲ್ಲಿದ್ದ ಅವರ ಹಳೆಮನೆಯ ಸ್ನಾನಗೃಹದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಇನ್ನು ಅತ್ಯುತ್ತಮ ಕಬಡ್ಡಿ ಆಟಗಾರರಾಗಿದ್ದ ಇವರು ಉಜಿರೆಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ಲೋನ್ ಆ್ಯಪ್‌ನವರು ಅಕ್ಕನ ಮಗಳ ಫೋಟೋವನ್ನು ‘Baby for sale’ಎಂದು ಎಡಿಟ್ ಮಾಡಿ ಸ್ವರಾಜ್ ಸ್ನೇಹಿತರು, ಕಾಂಟಾಕ್ಟ್ ಲಿಸ್ಟ್ ನಲ್ಲಿರುವವರಿಗೆ ಫಾರ್ವರ್ಡ್ ಮಾಡಿದ್ದಾರೆ ಎನ್ನಲಾಗಿದ್ದು, ಈ ನಡುವೆ ಆ.31 ರಂದು ಮಧ್ಯಾಹ್ನ 2 ಗಂಟೆಗೆ ಹಣ ಕೊಡಬೇಕೆಂದು ಲೋನ್ ಆಪ್‌ನವರು ಹೆದರಿಸಿದ್ದಾರೆ ಎನ್ನಲಾಗಿದೆ. ಈ ನಡುವೆ ಮೃತ ಸ್ವರಾಜ್ ಹಣ ನೀಡಿದ್ದರು ಕೂಡ ಒತ್ತಡ ಹೇರಿದ್ದರಂತೆ, ಈ ನಡುವೆ ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.