ಆಂಧ್ರಪ್ರದೇಶ : ಶ್ರೀಹರಿಕೋಟಾದಲ್ಲಿ ರಾಕೆಟ್ ಉಡಾವಣೆ ಕ್ಷಣಗಣನೆ ಸಂದರ್ಭ ಧ್ವನಿ ನೀಡಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿ ವಲರ್ಮತಿ ಅವರು ಹೃದಯ ಸ್ತಂಭನದಿಂದ ನಿಧನರಾದರು. ಅವರಿಗೆ ಐವತ್ತು ವರ್ಷ ವಯಸ್ಸಾಗಿತ್ತು.
ಜುಲೈ 14 ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ -3 ಅನ್ನು ಉಡಾವಣೆ ಮಾಡಲಾಯಿತು. ಈ ವೇಳೆ ವಿಜ್ಞಾನಿ ವಲಮರ್ತಿ ಅವರು ಚಂದ್ರಯಾನ-3 ಉಡಾವಣೆಯ ಸಂದರ್ಭದಲ್ಲಿ ಧ್ವನಿ ನೀಡಿದ್ದರು
ಇಸ್ರೋದಲ್ಲಿ, ರಾಕೆಟ್ ಉಡಾವಣೆ ಸಮಯದಲ್ಲಿ ಕೌಂಟ್‌ಡೌನ್‌ಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಕೌಂಟ್ ಡೌನ್ ಕರ್ತವ್ಯವನ್ನು ತಮ್ಮ ಗಂಭೀರ ಧ್ವನಿಯಿಂದ ನಿರ್ವಹಿಸಿದ ಉದ್ಯೋಗಿ ವಲರ್ಮತಿ ಅವರು ಶನಿವಾರ ರಾತ್ರಿ ಚೆನ್ನೈನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.
ವಲರ್ಮತಿ ಅವರು ಚಂದ್ರಯಾನ-3 ಸೇರಿದಂತೆ ಇಸ್ರೋ ಕೈಗೊಂಡ ಅನೇಕ ಪ್ರಯೋಗಗಳ ಉಸ್ತುವಾರಿ ವಹಿಸಿದ್ದರು. ಆದಾಗ್ಯೂ, ಜುಲೈ 14 ರಂದು ಅತ್ಯಂತ ಯಶಸ್ವಿಯಾದ ಚಂದ್ರಯಾನ-3 ಉಡಾವಣೆಯು ಅವರ ಕೊನೆಯ ಧ್ವನಿಯಾಗಿತ್ತು