ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಶ್ರೀ ಕೃಷ್ಣ ಜಯಂತಿ ಆಚರಣೆಯು ಸೆ. 6 ರಂದು ಬೆಳಿಗ್ಗೆ 10. 30ಕ್ಕೆ ವಳಕಾಡು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಉದ್ಘಾಟಿಸಲಿದ್ದು, ಶಾಸಕ ಯಶ್ನಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.