ಉಡುಪಿ :ಜಿಲ್ಲಾಡಳಿತ ಮತ್ತು ಜಿಲ್ಲಾಪಂಚಾಯತ್, ಉಡುಪಿ ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಬ್ರಹ್ಮಾವರ ವಲಯ ಮತ್ತು ಡಾ| ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ರಿ. ಅಂಬಲಪಾಡಿ ಇವರ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ 2023 ಕಾರ್ಯಕ್ರಮ ಬ್ರಹ್ಮಾವರದ ಶ್ಯಾಮಿಲಿ ಶನಾಯ ಸಭಾಭವನದಲ್ಲಿ, ಆಯೋಜಿಸಲಾಗಿತ್ತು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ವಹಿಸಿ ದೇಶದ ಭವಿಷ್ಯವನ್ನು ರೂಪಿಸುವ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದರು.ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಶ್ರೀ ಕೆ. ಜಯಪ್ರಕಾಶ್ ಹೆಗ್ಡೆ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್, ಮಣಿಪಾಲ ವಿಶ್ವವಿದ್ಯಾಲಯದ ಸಹಕುಲಾಧಿಪತಿಗಳಾದ ಶ್ರೀ ಎಚ್. ಎಸ್. ಬಲ್ಲಾಳ್, ಕಾಪು ಶಾಸಕರಾದ ಶ್ರೀ ಸುರೇಶ್ ಶೆಟ್ಟಿ ಗುರ್ಮೆ, ಜಿಲ್ಲಾಧಿಕಾರಿಗಳಾದ ಡಾ ವಿದ್ಯಾ ಕುಮಾರಿ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಪ್ರಸನ್ನ ಎಚ್., ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶ್ರೀ ಗಣಪತಿ, ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪ್ರೇಮ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಅಶೋಕ್ ಕಾಮತ್, ಶ್ರೀ ರಂಗನಾಥ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.