ಉಡುಪಿ: ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ವಿಧಾನ ಸಭಾ ಸ್ಪೀಕರ್ ಯುಟಿ ಖಾದರ್ ಉಡುಪಿಯ ಕೃಷ್ಣ ಮಠಕ್ಕೆ ಮಧ್ಯರಾತ್ರಿ ಭೇಟಿ ನೀಡಿ ಕೃಷ್ಣನ ದರ್ಶನ ಪಡೆದರು.
ಮಠದ ಸತ್ಯನಾರಾಯಣ ಭಟ್ ಅವರು ಸ್ಪೀಕರ್ ಅವರನ್ನು ಬರಮಾಡಿಕೊಂಡರು. ಮಠದ ಕೊಳದಲ್ಲಿ ಕೈ ಕಾಲು ತೊಳೆದು ಮಠದೊಳಗೆ ಭೇಟಿ ನೀಡಿದ ಯು.ಟಿ.ಖಾದರ್ ಅವರನ್ನು ಸತ್ಯನಾರಾಯಣ ಭಟ್ ಮತ್ತು ಸಮಿತಿಯವರು ಶಾಲು ಹೊದಿಸಿ ಸ್ವಾಗತಿಸಿದರು. ಪ್ರಸಾದವನ್ನು ನೀಡಿ ಹರಸಿದರು.
ಉಡುಪಿಯ ಕಡಿಯಾಳಿ ಯಲ್ಲಿ ಹುಲಿವೇಶ ಪ್ರದರ್ಶನ ಸ್ಪರ್ಧೆಯಲ್ಲಿ ಪಾಲ್ಗೊಂಡು ಹಿಂತಿರುಗುವಾಗ ಹಿತೈಷಿಗಳ ಕೋರಿಕೆ ಮೇರೆಗೆ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು
ಈ ಸಂದರ್ಭದಲ್ಲಿ ಸ್ಪೀಕರ್ ಅವರೊಂದಿಗೆ ಕೌನ್ಸಿಲರ್ ಭಾಸ್ಕರ ರಾವ್ ಕಿದಿಯೂರ್, ರಮೇಶ್ ಕಾಂಚನ್, ಮುನಿಯಾಲ ಉದಯಕುಮಾರ್ ಶೆಟ್ಟಿ, ಮುಸ್ತಫ ಹರೇಕಳ, ಬದ್ರುದ್ದೀನ್ ಜೊತೆಗಿದ್ದರು.