ಉಡುಪಿ : ನಗರದ ಉಡುಪಿ – ಮಣಿಪಾಲ – ಪರ್ಕಳ- ಹಿರಿಯಡಕ – ಪೆರ್ಡೂರು ಮುಖ್ಯ ರಸ್ತೆ (ರಾಷ್ಟ್ರೀಯ ಹೆದ್ದಾರಿ 160 A) ಕಾಮಗಾರಿ ಪ್ರಗತಿಯಲ್ಲಿದ್ದು, ಇಂದು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಆತ್ರಾಡಿ ಭಾಗಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.
ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜೊತೆಗೆ ಗುಣಮಟ್ಟ ಕಾಯ್ದುಕೊಂಡು ಕಾಮಗಾರಿ ನಡೆಸಲು ಗುತ್ತಿಗೆದಾರರಿಗೆ ಹಾಗೂ ಸಂಭಂದಿಸಿದ ಇಲಾಖಾಧಿಕಾರಿಗಳಿಗೆ ಶಾಸಕರು ಸೂಚಿಸಿದರು.
ಈ ಸಂದರ್ಭದಲ್ಲಿ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಶುಭಕರ್ ಶೆಟ್ಟಿ, ಆತ್ರಾಡಿ ಗ್ರಾಮ ಪಂಚಾಯತ್ ಸದಸ್ಯರಾದ ರತ್ನಾಕರ ಶೆಟ್ಟಿ, ರೂಪಾ ಶೆಟ್ಟಿ, ಪ್ರತಿಮಾ ನಾಯಕ್, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಸತ್ಯಾನಂದ ನಾಯಕ್, 80 ಬಡಗಬೆಟ್ಟು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಸಂದೀಪ್ ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.