ಬೈರಂಪಳ್ಳಿ : ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬ್ರಹ್ಮಾವರ ವಲಯ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ಳರ್ಪಾಡಿ ಇವರ ಸಹಯೋಗದೊಂದಿಗೆ ಇಂದು ಆಯೋಜಿಸಲಾದ “2023-24ನೇ ಶೈಕ್ಷಣಿಕ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ” ಆಯೋಜಿಸಲಾಯಿತು.
ಪಂದ್ಯಾಟದ ಉದ್ಘಾಟನೆಯನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಗ್ರಾಮೀಣ ಭಾಗದ ಮಕ್ಕಳಿಗೆ ಕ್ರೀಡೆಯಲ್ಲಿ ಆಸಕ್ತಿ ಹೆಚ್ಚಿಸಲು ಇಂತಹ ಕ್ರೀಡಾಕೂಟಗಳ ಅವಶ್ಯಕತೆ ಇದೆ ಮತ್ತು ಶಿಕ್ಷಣದಷ್ಟೇ ಕ್ರೀಡೆಯು ಅತ್ಯವಶ್ಯಕವಾಗಿದೆ ಎಂದು ಹೇಳಿದ ಅವರು ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಕ್ರೀಡೆಗೆ ಹೆಚ್ಚಿನ ಒತ್ತನ್ನು ನೀಡುತ್ತಿದೆ ಎಂದರು.
ಈ ಸಂದರ್ಭದಲ್ಲಿ ಬೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಮಲ್ಯ, ಬೈರಂಪಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿಯಾನಂದ ಹೆಗ್ಡೆ ಹಾಗೂ ಬೈರಂಪಳ್ಳಿ ಗ್ರಾಮ ಪಂಚಾಯತ್ ಸದಸ್ಯರು, ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.