ಉಡುಪಿ : ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಇದರ 45 ನೇ ವಾರ್ಷಿಕ ಮಹಾಸಭೆ ಇಂದು ನಡೆಯಿತು.
ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಭಾಗವಹಿಸಿದರು.
ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರನ್ನು ಹಾಗೂ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಅವರನ್ನು ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಮಾಜಿ ಸಚಿವರಾದ ಪ್ರಮೋದ್ ಮತ್ತು ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ನ ಪದಾಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.