ಬೆಂಗಳೂರು : ಮದುವೆಯಾಗಿ ಮೂರು ತಿಂಗಳ ಅಂತರದಲ್ಲೇ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನಿನ್ನೆ ರಾತ್ರಿ ಗೃಹಿಣಿ ಕೃಷ್ಣವೇಣಿ ಆತ್ಮಹತ್ಯೆ ಮಾಡಿಕೊಂಡಿದ್ದು ಇಂದು ಬೆಳಗ್ಗೆ ವಿಚಾರ ಗೊತ್ತಾಗುತ್ತಿದ್ದಂತೆ ಕಾಡುಗೋಡಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲಣೆ ನಡೆಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಮೂಲತಃ ಮೈಸೂರಿನ ಸಾಲಿಗ್ರಾಮದ ಕೃಷ್ಣವೇಣಿಯ ವಿವಾಹವು ಮೂರು ತಿಂಗಳ ಹಿಂದಷ್ಟೇ ಬೆಂಗಳೂರಿನ ಕುಂಬೇನ ಅಗ್ರಹಾರ ಮೂಲದ ಪೃಥ್ವಿರಾಜ್ ಎಂಬುವರೊಂದಿಗೆ ನಡೆದಿತ್ತು.
ಖಾಸಗಿ ಕಂಪೆನಿಯೊಂದರಲ್ಲಿ ಪೃಥ್ವಿರಾಜ್ ಕೆಲಸ ಮಾಡಿಕೊಂಡಿದ್ದರೆ ಕೃಷ್ಣವೇಣಿ ಗೃಹಿಣಿಯಾಗಿದ್ದರು. ದಂಪತಿಯು ಕಾಡುಗೋಡಿ ಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ನಿನ್ನೆ ಮನೆಯಲ್ಲಿ ಯಾರೂ ಇಲ್ಲದಿರುವಾಗ ಕೃಷ್ಣವೇಣಿ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತಳ ಪೋಷಕರು ತನ್ನ ಮಗಳ ಸಾವಿಗೆ ಅಳಿಯನೇ ಕಾರಣ ಎಂದು ಆರೋಪಿಸಿ ದೂರು ನೀಡಿದ್ದಾರೆ.
ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ವೈದೇಹಿ ಆಸ್ಪತ್ತೆಗೆ ರವಾನಿಸಿ ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.