ಮಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಶುಚಿ ಕಾರ್ಯಕ್ರಮದ ಅಡಿ ರಾಜ್ಯದಾದ್ಯಂತ ಸರ್ಕಾರಿ ಹಾಗೂ ಅನುದಾನಿತ ಶಾಲಾ / ಕಾಲೇಜುಗಳಲ್ಲಿನ 10 ರಿಂದ 18 ವರ್ಷದ ಹೆಣ್ಣು ಮಕ್ಕಳಿಗೆ ಶುಚಿ-ನನ್ನ ಮೈತ್ರಿ ಮುಟ್ಟಿನ ಕಪ್ ಯೋಜನೆ ಅಡಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್ ಗಳನ್ನು ಉಚಿತವಾಗಿ ವಿತರಿಸುವ ಯೋಜನೆ ಸೆ. 11 ರಂದು ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಮಂಗಳೂರಿನ ನೆಹರೂ ಮೈದಾನದಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ದೊರಕಲಿದೆ, ದಕ್ಷಿಣ ಕನ್ನಡ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ 15,000 ಮಂದಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ವ್ಯಾಸಂಗ ಮಾಡುವವರು ಪ್ರಯೋಜನ ಪಡೆದುಕೊಳ್ಳಲಿದ್ದಾರೆ.
ವಿಶೇಷ ಅತಿಥಿ ಮತ್ತು ರಾಯಭಾರಿಯಾಗಿ ಚಿತ್ರನಟಿ ಸಪ್ತಮಿ ಗೌಡ ಭಾಗವಹಿಸಲಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಅವರು ಸ್ಪೀಕರ್ ಯು.ಟಿ.ಖಾದರ್ ಉಪಸ್ಥಿತಿಯಲ್ಲಿ ಶುಚಿ – ನನ್ನ ಮೈತ್ರಿ ಮುಟ್ಟಿನ ಕಪ್ ಯೋಜನೆಗೆ ಚಾಲನೆ ನೀಡಲಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾ ಣಇಲಾಖೆಯಡಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಶುಚಿ ಕಾರ್ಯಕ್ರಮದಡಿ ರಾಜ್ಯಾದ್ಯಂತ ಸರ್ಕಾರಿ ಹಾಗೂ ಅನುದಾನಿತ ಶಾಲಾ/ ಕಾಲೇಜುಗಳಲ್ಲಿನ 10 ರಿಂದ 18 ವರ್ಷದ ಹೆಣ್ಣುಮಕ್ಕಳಿಗೆ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್ಗಳನ್ನುಉಚಿತವಾಗಿ ವಿತರಿಸುವ ಯೋಜನೆಯನ್ನು 2013-14ನೇ ಸಾಲಿನಲ್ಲಿಅನುಷ್ಠಾನಗೊಳಿಸಲಾಗಿದೆ. ಅದರಂತೆ, ಪ್ರತಿ ವರ್ಷ ಸುಮಾರು 19 ಲಕ್ಷ ಮಕ್ಕಳಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್ಗಳನ್ನುವಿತರಿಸಲಾಗುತ್ತಿದೆ.
ಮೈತ್ರಿ ಮುಟ್ಟಿನ ಕಪ್ (ಋತುಚಕ್ರದ) ವೈಜ್ಞಾನಿಕ ನಿರ್ವಹಣೆಯ ಒಂದು ಉಪಯುಕ್ತ ಸಾಧನವಾಗಿದೆ. ಇದು ಮೆಡಿಕಲ್ ಗ್ರೇಡ್ ಸಿಲಿಕಾನ್‍ನಿಂದ ಮಾಡಲಾಗಿದ್ದು, ಸುರಕ್ಷಿತವಾಗಿದೆ. ಮುಟ್ಟಿನ ಸಮಯದಲ್ಲಿನ ನೈರ್ಮಲ್ಯ ಕಾಪಾಡಲು ವೈದ್ಯಕೀಯವಾಗಿ ಬಳಸಬಹುದಾದಂತಹ ಹಾಗೂ ಸ್ಯಾನಿಟರಿ ಪ್ಯಾಡ್‍ಗಳ ಪರ್ಯಾಯ ಸಾಧನವಾಗಿದೆ ಎನ್ನುವುದು ಕರ್ನಾಟಕ ಆರೋಗ್ಯ ಇಲಾಖೆಯ ವಿವರಣೆಯಾಗಿದೆ.