ಕುತ್ಯಾರು : ದೃಶ್ಯ ನ್ಯೂಸ್ ವರದಿ : ಯುವಕ ಮಂಡಲ (ರಿ.) ಕುತ್ಯಾರು ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕುತ್ಯಾರು ಗ್ರಾಮದ ಶಾಲಾ ಮಕ್ಕಳಿಗೆ ಮತ್ತು ಕುತ್ಯಾರು ಗ್ರಾಮಸ್ಥರಿಗೆ ಇಂದು ಆಯೋಜಿಸಲಾದ “ಗ್ರಾಮೀಣ ಕ್ರೀಡಾಕೂಟ ಹಾಗೂ ಮುದ್ದುಕೃಷ್ಣ ವೇಷ ಸ್ಪರ್ಧೆ” ನಡೆಯಿತು.
ಕಾರ್ಯಕ್ರಮದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಮಾತನಾಡಿ ಪೊಷಕರು ಮಕ್ಕಳಿಗೆ ಕೃಷ್ಣನ ವೇಷ ತೊಡಿಸುವುದರ ಜೊತೆಗೆ ಶ್ರೀಕೃಷ್ಣ ಸಂದೇಶಗಳನ್ನು ಮಕ್ಕಳಿಗೆ ತಿಳಿಸಬೇಕು ಮತ್ತು ಮಕ್ಕಳನ್ನು ಮುಂದೊಂದು ದಿನ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನಾಗಿ ರೂಪಿಸಬೇಕು ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಕುತ್ಯಾರು ಯುವಕ ಮಂಡಲದ ಅಧ್ಯಕ್ಷರಾದ ಸುಶಾಂತ್ ಶೆಟ್ಟಿ, ಕುತ್ಯಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಸದಸ್ಯರಾದ ಲತಾ ಆಚಾರ್ಯ, ಧೀರಜ್ ಶೆಟ್ಟಿ, ಹಿರಿಯರಾದ ಕಿಶೋರ್ ಕುಮಾರ್ ಪಟೇಲ್ ಹಾಗೂ ಯುವಕರ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.