ಉಡುಪಿ : ಸೆಪ್ಟೆಂಬರ್ 10: ದೇವಾಡಿಗರ ಸೇವಾ ಸಂಘ (ರಿ.) ಚಿಟ್ಪಾಡಿ, ಉಡುಪಿ ದೇವಾಡಿಗರ ಯುವ ಸಂಘಟನೆ ಮತ್ತು ಮಹಿಳಾ ಸಂಘಟನೆ ಹಾಗೂ ಶ್ರೀ ಏಕನಾಥೇಶ್ವರೀ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ರಿ.) ಚಿಟ್ಪಾಡಿ, ಉಡುಪಿ ಇವರ ಸಹಯೋಗದೊಂದಿಗೆ ಸೆಪ್ಟೆಂಬರ್ 10ರಂದು ದೇವಾಡಿಗರ ಸಭಾ ಭವನ, ಚಿಟ್ಟಾಡಿಯಲ್ಲಿ “ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣಾ ಸಮಾರಂಭ ಹಾಗೂ ಸನ್ಮಾನ ಕಾರ್ಯಕ್ರಮ” ನಡೆಯಿತು.
ದೇವಾಡಿಗರ ಸೇವಾ ಸಂಘ (ರಿ.) ಚಿಟ್ಪಾಡಿ, ಉಡುಪಿ ಅಧ್ಯಕ್ಷರಾದ ಗಣೇಶ್ ದೇವಾಡಿಗ ಅಂಬಲಪಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು
ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಹಾಗೂ ಕಾಪು ಶಾಸಕರಾದ ಗುರ್ಮೆ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭಹಾರೈಸಿದರು.
ದೇವಾಡಿಗರ ಸೇವಾ ಸಂಘ (ರಿ.) ಚಿಟ್ಪಾಡಿ, ಉಡುಪಿ ಇದರ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಹಾಗೂ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು.
ಸಮಾರಂಭದಲ್ಲಿ ಕಾಪು ಕ್ಷೇತ್ರದ ಶಾಸಕರಾದ *ಶ್ರೀ ಸುರೇಶ್ ಶೆಟ್ಟಿ ಗುರ್ಮೆ, ದೇವಾಡಿಗ ಸಮಾಜದ ಗಣ್ಯರಾದ ಶ್ರೀ ಧರ್ಮಪಾಲ ದೇವಾಡಿಗ, ಸಂಘದ ಅಧ್ಯಕ್ಷರಾದ ಶ್ರೀ ಗಣೇಶ ದೇವಾಡಿಗ, ಪ್ರಮುಖರಾದ ಶ್ರೀ ರತ್ನಾಕರ ಶೇರಿಗಾರ್* ಹಾಗೂ ದೇವಾಡಿಗ ಸಮುದಾಯದ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.