ಶಿರ್ವ : ಕಾಪು ವಿಧಾನಸಭಾ ಕ್ಷೇತ್ರದ ಶಿರ್ವ ಪದವು ಕೋಟೆ ಭಗವಾನ್ ಶ್ರೀ ಬಬ್ಬುಸ್ವಾಮಿ ಕ್ಷೇತ್ರದ ಮೇಲ್ಚಾವಣಿ ನಿರ್ಮಾಣಕ್ಕೆ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರ ಶಿಫಾರಸ್ಸಿನ ಮೇರೆಗೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. 5 ಲಕ್ಷ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಉದ್ಘಾಟನೆಯನ್ನು ಕಾಪು ವಿಧಾನಸಭಾ ಕ್ಷೇತ್ರದ ನೂತನ ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರೊಂದಿಗೆ ಸೇರಿ ನೆರವೇರಿಸಿದರು.
ಈ ಸಂದರ್ಭದಲ್ಲಿ ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸವಿತಾ ರಾಜೇಶ್, ಶ್ರೀ ಬಬ್ಬುಸ್ವಾಮಿ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷರಾದ ಮೋಹನ್ ಎಸ್, ಶಿರ್ವ ವ್ಯವಸಾಯಿಕ ಸಂಘ ನಿಯಮಿತ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ, ಶಿರ್ವ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ರತನ್ ಕುಮಾರ್ ಶೆಟ್ಟಿ, ಕಲ್ಲೊಟ್ಟು ಧರ್ಮೆಟ್ಟುಮನೆ ಶಂಕರ್ ಶೆಟ್ಟಿ, ಗುರಿಕಾರರಾದ ಜಯರಾಮ, ಪ್ರಧಾನ ಅರ್ಚಕರಾದ ಶ್ರೀಧರ, ಶಿರ್ವ ಪದವು ಲೀಲಾ ಮೊದಲಾದವರು ಉಪಸ್ಥಿತರಿದ್ದರು.