⭕️2.5 ಕ್ವಿಂಟಾಲ್ ಗೋ ಮಾಂಸ ಪತ್ತೆ.
⭕️ಮೂವರು ಆರೋಪಿಗಳು ಪೊಲೀಸ್ ವಶಕ್ಕೆ. ಮಂಗಳೂರು : ದೃಶ್ಯ ನ್ಯೂಸ್ ವರದಿ: ನಗರದಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ವಾಹನವೊಂದನ್ನು ಬಜರಂಗ ದಳದ ಕಾರ್ಯಕರ್ತರು ತಡೆದು ನಿಲ್ಲಿಸಿ, ವಾಹನದಲ್ಲಿದ್ದವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರೋಪಿಗಳನ್ನು ಕಳವಾರು ಗ್ರಾಮದ ದಾವೂದ್, ಜೋಕಟ್ಟೆಯ ಬದ್ರುದ್ದೀನ್ ಮತ್ತು ಯಾಸೀನ್ ಎಂದು ಗುರುತಿಸಲಾಗಿದೆ.
ವಾಹನದಲ್ಲಿ ಸುಮಾರು 2.5 ಕ್ವಿಂಟಾಲ್ ಗೋ ಮಾಂಸವನ್ನು ಜೋಕಟ್ಟೆಯಿಂದ ನಗರದ ಬೀಫ್ ಸ್ಟಾಲ್ಗಳಿಗೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು.
ಗೋ ಹತ್ಯಾ ನಿಷೇಧ ಕಾಯ್ದೆಯಡಿ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.